
ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿಯಾಗಲಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು.
ಕಲಾಪದ ವೇಳೆ ಮಾತನಾಡಿದ ಸಚಿವರು ಶೀಘ್ರದಲ್ಲೇ ರೈತರ ಪಂಪ್ ಸೆಟ್ ಗೆ ಸೌರವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಜಾರಿಯಾಗಲಿದೆ , ರೈತರು ಪಂಪ್ ಸೆಟ್ ಗಳಿಗೆ ಸೌರ್ ವಿದ್ಯುತ್ ಕಲ್ಪಿಸಿಕೊಳ್ಳಲು ಸುಮಾರು 4.5 ಲಕ್ಷ ರೂ ಖರ್ಚಾಗಬಹುದು ಎಂದು ತಿಳಿಸಿದ್ದಾರೆ.
ಸೌರ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ 3.5 ಲಕ್ಷ ರೂ ಸಹಾಯಧನ ದೊರೆಯಲಿದೆ. ಉಳಿದ 1 ಲಕ್ಷವನ್ನು ಬ್ಯಾಂಕ್ ಮೂಲಕ ನೀಡುವ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ರೈತರ ಕೃಷಿ ಪಂಪ್ಸೆಟ್ಗಳಿಗೆ ಸಹಾಯ ಧನದ ರೂಪದಲ್ಲಿ 16 ಸಾವಿರ ಕೋಟಿ ರೂ. ನೀಡಲಾಗುತ್ತಿದೆ ಎಂದು ಹೇಳಿದರು.