ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರೈತರಿಗೆ ಹೊಸ ತಳಿಯ ಬೀಜಗಳನ್ನು ವಿತರಣೆಗೆ ರಾಜ್ಯ ಸರ್ಕಾರವು ಮುಂದಾಗಿದೆ.
ಕರ್ನಾಟಕ ರಾಜ್ಯ ಬೀಜ ನಿಗಮ ಹಾಗೂ ಹೈದರಾಬಾದ್‌ನ ಅಂತರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆಯ ಅಧಿಕಾರಿಗಳು (ಇಕ್ರಿಸ್ಯಾಟ್) ಹೊಸ ತಳಿಗಳ ಬೀಜಗಳನ್ನು ರಾಜ್ಯದ ರೈತರಿಗೆ ತ್ವರಿತವಾಗಿ ವಿತರಿಸುವ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ರಾಜ್ಯ ಸರ್ಕಾರದ ಅಂಗಸಂಸ್ಥೆಯಾದ ಕರ್ನಾಟಕ ರಾಜ್ಯ ಬೀಜ ನಿಗಮವು ಪ್ರತಿ ವರ್ಷ ಸರಾಸರಿ 3.5 ಲಕ್ಷ ಕ್ವಿಂಟಲ್ ಬೀಜ ಸರಬರಾಜು ಮಾಡುತ್ತಿದೆ.