ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದವರಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅಲ್ಪಸಂಖ್ಯಾತರ ಕಾಲನಿಗಳ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ಕಾಲನಿಗೆ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿ, ಕಾಮಗಾರಿಗಳ ಸಾವಿರ ಕೋಟಿ ಆದ್ಯತಾ ಪಟ್ಟಿಯನ್ವಯ ಕೆಲಸ ಕೈಗೆತ್ತಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಸತಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಗಳ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಕಾಲೊನಿಗಳ ಅಭಿವೃದ್ಧಿ ಗೆ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ 1 ಸಾವಿರ ಕೋಟಿ ಕ್ರಿಯಾ ಯೋಜನೆ ರೂಪಿಸಿ ಆದ್ಯತೆ ಅನುಸಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಹೇಳಿದ್ದಾರೆ.
ಇನ್ನು ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಪಡೆಯುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ನೀಡುವ ಸಾಲದ ಮೊತ್ತವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುವಂತೆ ಸೂಚನೆ ನೀಡಿದ್ದಾರೆ.