ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ 2,000 ರೂ.ಗೆ ಕಾಯುತ್ತಿರುವ ಯಜಮಾನಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಇಂತಹ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ.
ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಅಗತ್ಯವಿರುವ ಸಲಹೆ ಸೂಚನೆಗಳನ್ನು ನೀಡಲಾಗಿದ್ದು, ಕೆಲವು ನ್ಯೂನ್ಯತೆಗಳನ್ನು ಸರಿಪಡಿಸಿ, ಎಲ್ಲ ಫಲಾನುಭವಿಗಳ ಖಾತೆಗೆ ತ್ವರಿತಗತಿಯಲ್ಲಿ ಹಣ ಸಂದಾಯ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಗೃಹಲಕ್ಷಿ ಯೋಜನೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಬೇಕಿದೆ. ಹಾಗಾಗಿ ಪ್ರತಿ ಮನೆಯ ಸಮೀಕ್ಷೆ ನಡೆಸಿ ಬಿಟ್ಟು ಹೋದವರನ್ನು ಗುರುತಿಸಿ ಸೌಲಭ್ಯ ಒದಗಿಸಲು ಎಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಗಳಿಗೆ ಸೂಚನೆ ನೀಡಲಾಗಿದೆ.