alex Certify BREAKING : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : 262 ಹೊಸ ‘AMBULANCE’ ಗಳಿಗೆ ಸಿಎಂ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : 262 ಹೊಸ ‘AMBULANCE’ ಗಳಿಗೆ ಸಿಎಂ ಚಾಲನೆ

ಬೆಂಗಳೂರು : ರಾಜ್ಯದ ಆರೋಗ್ಯ ಇಲಾಖೆಯ 108 ಆಂಬ್ಯುಲೆನ್ಸ್ ಆರೋಗ್ಯ ಸೇವೆ ಬಲಪಡಿಸಲು 82.02 ಕೋಟಿ ರೂ. ವೆಚ್ಚದ 262 ಹೊಸ 108 ಆಂಬ್ಯುಲೆನ್ಸ್ಗಳಿಗೆ ಸಿಎಂ ಸಿದ್ದರಾಮಯ್ಯ ಇಂದು ಗುರುವಾರ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದರು.

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ.  ಪ್ರತೀ ಜಿಲ್ಲೆಯಲ್ಲಿ MRI ಸ್ಕ್ಯಾನಿಂಗ್ ಸೌಲಭ್ಯ ಇರಬೇಕು. ಖಾಸಗಿ ಡಯಾಗ್ನೊಸ್ಟಿಕ್ ಸೆಂಟರ್ ಗಳಲ್ಲಿ ಸೇವಾವೆಚ್ಚ ದುಬಾರಿ ಆಗಿರುವುದರಿಂದ ಬಡವರಿಗೆ ಬಹಳ ಕಷ್ಟ ಆಗುತ್ತಿದೆ. ಈ ಕಾರಣಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾವಿರಾರು ಮಂದಿ ಬೇಡಿಕೆ ಅರ್ಜಿ ಕೊಡುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲೇ ಉತ್ತಮ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ವಾತಾವರಣ ರಾಜ್ಯದಲ್ಲಿ ಸೃಷ್ಟಿ ಆಗುತ್ತಿದೆ. ಜಯದೇವ ಆಸ್ಪತ್ರೆಯಿಂದ ಉತ್ತಮಸೇವೆ ಸಾಧ್ಯ ಆಗಿರುವಾಗ ಉಳಿದ ಕಡೆಗಳಲ್ಲೂ ಅದೇ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ. ರಾಜ್ಯ ಸರ್ಕಾರ ಆ ದಿಕ್ಕಿನಲ್ಲಿ ಶ್ರಮಿಸುತ್ತಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...