ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಈಗಾಗಲೇ ನೋಂದಣಿ ಶುರುವಾಗಿದ್ದು, 1 ತಿಂಗಳಲ್ಲೇ ಬರೋಬ್ಬರಿ 1.09 ಕೋಟಿ ಗ್ರಾಹಕರು ನೋಂದಣಿ ಮಾಡಿಸಿಕೊಂಡಿದ್ದಾರೆ.
ಇದೀಗ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಮೂರು ವಿದ್ಯುತ್ ಸಂಬಂಧಿ ಯೋಜನೆಯನ್ನು ಗೃಹಜ್ಯೋತಿಯಲ್ಲಿ ವಿಲೀನ ಮಾಡಿದೆ. ಈ ಮೂಲಕ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ನೇರ ಲಾಭ ಸಿಗಲಿದೆ. ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿಯಡಿ ವಿಲೀನಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದುವರೆಗೆ ಭಾಗ್ಯ ಜ್ಯೋತಿ ಮತ್ತು ಕುಟೀರ ಜ್ಯೋತಿ ಯೋಜನೆಗಳ ಫಲಾನುಭವಿ ಕುಟುಂಬಗಳಿಗೆ 40 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತಿತ್ತು. ಈಗ ಈ ಎರಡು ಯೋಜನೆಗಳನ್ನುಗೃಹಜ್ಯೋತಿ ಯೋಜನೆಯಡಿ ವಿಲೀನ ಮಾಡಲಾಗಿದ್ದು , 53 ಯೂನಿಟ್ ಹಾಗೂ ಶೇ.10 ರಷ್ಟು ಹೆಚ್ಚುವರಿ ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಿದೆ. ಅದೇ ರೀತಿ ಅಮೃತ ಜ್ಯೋತಿ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ವಿದ್ಯುತ್ ದರವನ್ನು ಡಿಬಿಟಿ ಮೂಲಕ ಖಾತೆಗೆ ವರ್ಗಾವಣೆ ಮಾಡಲಾಗುತ್ತಿತ್ತು. ಈಗ ಈ ಯೋಜನೆಯನ್ನು ಕೂಡ ಗೃಹಜ್ಯೋತಿಗೆ ಸೇರಿಸಲಾಗಿದ್ದು, ಈ ಮೂಲಕ ಫಲಾನುಭವಿಗಳಿಗೆ 75 ಯೂನಿಟ್ ಮತ್ತು ಶೇ.10ರಷ್ಟು ಹೆಚ್ಚುವರಿ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಈ ಮೂಲಕ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ನೇರ ಲಾಭ ಸಿಗಲಿದೆ. ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿಯಡಿ ವಿಲೀನಗೊಳಿಸಿ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ.