ಬೆಂಗಳೂರು : ನಗರ ಆರೊಗ್ಯ ಮತ್ತು ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್)ಗಳು ಇನ್ಮುಂದೆ ಪ್ರತಿ ದಿನ ಬೆಳಿಗ್ಗೆ 8ರಿಂದ ಮದ್ಯಾಹ್ನ 12 ಗಂಟೆಯವರೆಗೆ ಹಾಗೂ ಮದ್ಯಾಹ್ನ 4 ರಿಂದ ರಾತ್ರಿ 8 ಗಂಟೆಯವರೆಗೆ ಎರಡು ಹಂತದಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
15ನೇ ಹಣಕಾಸು ಆಯೋಗದಡಿಯಲ್ಲಿ ನಗರ ಪ್ರದೇಶದಲ್ಲಿ ವಾಸಸಿಸುವ ಬಡ, ದುರ್ಬಲ, ಕೂಲಿ ಕಾರ್ಮಿಕರು ಮತ್ತು ದುಡಿಯುವ ವರ್ಗದ ಸಮುದಾಯಕ್ಕೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳ್ನು ಒದಗಿಸುವ ಉದ್ದೇಶದಿಂದ ಮತ್ತು ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಕಲ್ಪಿಸುವ ಉದ್ದೇಶದಿಂದ ನಮ್ಮ ಕ್ಲಿನಿಕ್ ಪ್ರಾರಂಭಿಸಲಾಗಿರುತ್ತದೆ. ಈ ನಗರ ಆರೋಗ್ಯ ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್‌ಗಳು) ಬೆಳಗ್ಗೆ 9 ರಿಂದ 4.30ರವರೆಗೆ ಕಾರ್ಯರ್ನಿಹಿಸುತ್ತಿದ್ದವು.
ದುಡಿಯುವ ವರ್ಗದ ಜನರಿಗೆ ಹಾಗೂ ದಿನಗೂಲಿ ಕಾರ್ಮಿಕರಿಗೆ ಉಚಿತವಾಗಿ ಆರೋಗ್ಯ ಸೇವೆ ನೀಡಲು ಮತ್ತು ದೂರದ ರೆಫೆರಲ್ ಆಸ್ಪತ್ರೆಗಳಿಗೆ ತೆರಳುವುದನ್ನು ತಪ್ಪಿಸುವ ಉದ್ದೇಶದಿಂದ ಕಾರ್ಯನಿರ್ವಹಣೆಯ ಸಮಯದಲ್ಲಿ ಬದಲಾವಣೆ ಮಾಡುವ ಕುರಿತ ಆದೇಶದಂತೆ ಪ್ರಾಯೋಗಿಕವಾಗಿ ಕೊಪ್ಪಳದ ನಗರ ಆರೊಗ್ಯ ಮತ್ತು ಕ್ಷೇಮ ಕೇಂದ್ರ (ನಮ್ಮ ಕ್ಲಿನಿಕ್)ಗಳ ಸಮಯವನ್ನು ಪ್ರತಿ ದಿನ ಬೆಳಿಗ್ಗೆ 8ರಿಂದ ಮದ್ಯಾಹ್ನ 12ರ ವರೆಗೆ ಹಾಗೂ ಮದ್ಯಾಹ್ನ 4 ರಿಂದ ರಾತ್ರಿ 8ರ ವರೆಗೆ ಕಾರ್ಯನಿರ್ವಹಿಸಲಿದ್ದು, ಈ ಬದಲಾದ ಈ ಸಮಯದಲ್ಲಿ ದೊರೆಯುವ ಆರೋಗ್ಯ ಸೇವೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.