alex Certify BIG NEWS : ಪಡಿತರದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಅಕ್ಕಿ ಜೊತೆ ರಾಗಿ, ಜೋಳ ನೀಡಲು ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಪಡಿತರದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಅಕ್ಕಿ ಜೊತೆ ರಾಗಿ, ಜೋಳ ನೀಡಲು ಚಿಂತನೆ

ಬೆಂಗಳೂರು : ಪಡಿತರದಾರರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಅಕ್ಕಿ ಜೊತೆ ರಾಗಿ, ಜೋಳ ನೀಡಲು ಸರ್ಕಾರ ಚಿಂತನೆ ನಡೆಸಿದೆ.

ಕನಿಷ್ಠ ಬೆಂಬಲ ಬೆಲೆ ಯಡಿ ಅಕ್ಕಿ ಜೊತೆ ರಾಗಿ ಅಥವಾ ಜೋಳವನ್ನೂ ಸೇರಿಸಿ ಕೊಡಲು ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ. 5 ಕೆಜಿ ಅಕ್ಕಿ ನೀಡಲು ಕೇಂದ್ರ ನಿರಾಕರಣೆ ಮಾಡಿದೆ ಹೀಗಾಗಿ ಮುಂದಿನ ದಿನಗಳಲ್ಲಿ ಜೋಳ ಹಾಗೂ ರಾಗಿ ಕೊಡಲು ಚರ್ಚೆ ನಡೆಸಲಾಗಿದೆ. 8 ಕೆಜಿ ಅಕ್ಕಿ ಜೊತೆ 2ಕೆಜಿ ಜೋಳ/ರಾಗಿ ನೀಡಲು ಚಿಂತನೆ ನಡೆಸಲಾಗಿದೆ ಎಂದರು. ಉತ್ತರಕರ್ನಾಟಕ ಭಾಗದಲ್ಲಿ ಜೋಳ, ದಕ್ಷಿಣ ಕರ್ನಾಟಕ ಭಾಗದಲ್ಲಿ ರಾಗಿ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.

ಇಂದಿನಿಂದ ಅನ್ನಭಾಗ್ಯ ಗ್ಯಾರಂಟಿ ಯೋಜನೆ ಅಧಿಕೃತವಾಗಿ ಜಾರಿ ಆಗಲಿದೆ. ಐದು ಕೆಜಿ ಅಕ್ಕಿ ಜೊತೆಗೆ ಉಳಿದ ಐದು ಕೆಜಿ ಅಕ್ಕಿ ಬದಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ.ಶನಿವಾರದಿಂದಲೇ ಹಂತ ಹಂತವಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅಕ್ಕಿ ದಾಸ್ತಾನು ಸಂಗ್ರಹವಾಗುವವರೆಗೆ ಹಣ ನೀಡಲಾಗುತ್ತದೆ. ಪ್ರತಿ ಕೆಜಿಗೆ 34 ರೂಪಾಯಿಯಂತೆ 170 ರೂ. ನೀಡಲಾಗುವುದು.
ಅಕ್ಕಿ ಪೂರೈಕೆಯಾಗದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಬಿಪಿಎಲ್ ಕಾರ್ಡ್ ದಾರರ ಪೈಕಿ ಶೇಕಡ 90ರಷ್ಟು ಮಂದಿಯ ಬ್ಯಾಂಕ್ ಖಾತೆ ಇರುವ ಮಾಹಿತಿ ಇದ್ದು, ಮುಂದಿನ ದಿನಗಳಲ್ಲಿ ದಕ್ಷಿಣ ಕರ್ನಾಟಕದಲ್ಲಿ ರಾಗಿ, ಉತ್ತರ ಕರ್ನಾಟಕದಲ್ಲಿ ಜೋಳ ನೀಡಲಾಗುವುದು. ಸದ್ಯ ರಾಗಿ ದಾಸ್ತಾನು ಇದ್ದು, ಜೋಳದ ದಾಸ್ತಾನು ಇಲ್ಲ. ಜೋಳ ದಾಸ್ತಾನು ಮಾಡಿದ ನಂತರ ರಾಗಿ, ಜೋಳ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...