ಬೆಂಗಳೂರು : ಪ್ರಸಕ್ತ (2024-25) ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಿದ್ದು, ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 21 ರ ಸಂಜೆ 5.30 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ. 08272-228010, 9482194105 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.