ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ನೌಕರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹಬ್ಬ ಹರಿದಿನಗಳಲ್ಲಿ ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನ ನೀಡಲು ರಾಜ್ಯ ಸರ್ಕಾರ ಆದೇಶಿಸಿದೆ.
ರಾಷ್ಟ್ರೀಯ ರಜಾ ದಿನ ಮತ್ತು ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ಸಿಬ್ಬಂದಿಗೆ ಹೆಚ್ಚುವರಿ ವೇತನ ಪಾವತಿ ವ್ಯವಸ್ಥೆ ಮರು ಜಾರಿಗೆ ರಾಜ್ಯ ಸರ್ಕಾರ ಆದೇಶಿಸಿದೆ.
ಪ್ರಸ್ತುತ ಶಕ್ತಿ ಯೋಜನೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿದೆ. ಹೀಗಾಗಿ ಜುಲೈ 2023ರಿಂದ ರಾಷ್ಟ್ರೀಯ ರಜಾ ದಿನ ಮತ್ತು ನೌಕರರು ಆಯ್ಕೆ ಮಾಡಿಕೊಂಡ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಕೋವಿಡ್ ಪೂರ್ವದಲ್ಲಿದ್ದಂತೆ ಹೆಚ್ಚುವರಿ ವೇತನವನ್ನು ಪಾವತಿಸುವುದಕ್ಕೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಸಿಬ್ಬಂದಿ ಕರ್ತವ್ಯದ ಮೇಲೆ ನಿಯೋಜನೆ ಮಾಡಲು ಸೂಚಿಸಲಾಗಿದೆ.