ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಚೇತನ, ಧನಶ್ರೀ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಸೇವಾ ಕೇಂದ್ರ, ಗ್ರಾಮಒನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ, ದೇವದಾಸಿ ಪುನರ್ವಸತಿ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿಸೆಂಬರ್ 22 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಯೋಜನೆಗಳ ಲಾಭ ಪಡೆಯಲಿಚ್ಛಿಸುವವರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಬಹುದು.