ಬೆಂಗಳೂರು : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಎಂಬಂತೆ 50 ʼಅಕ್ಕ ಕೆಫೆ – ಬೇಕರಿʼ ತೆರೆಯುವ ಯೋಜನೆ ಆರಂಭಿಸಲು ಸಿದ್ದತೆ ನಡೆಸಲಾಗಿದೆ.
ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ರಾಜ್ಯಾದ್ಯಂತ ಮಹಿಳೆಯರೇ ನಡೆಸುವ 50 ʼಅಕ್ಕ ಕೆಫೆ – ಬೇಕರಿʼ ತೆರೆಯಲು ಯೋಜನೆ ರೂಪಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.