ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಪ್ರತ್ಯೇಕ ಬಸ್ ವ್ಯವಸ್ಥೆಗೆ ಸರ್ಕಾರ ಚಿಂತನೆ ನಡೆಸಿದೆ.
ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್ ಗಳಲ್ಲಿ ಈವರೆಗೆ 259 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಪ್ರತಿದಿನ ಸರಾಸರಿ 60ರಿಂದ 63 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ಮಹಿಳೆಯರಿಗೆ ಪ್ರತ್ಯೇಕ ಬಸ್ ಗಳ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಕುರಿತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮಾಹಿತಿ ನೀಡಿದ್ದು, ಬಿಎಂಟಿಸಿಯಲ್ಲಿ ಪ್ರಾಯೋಗಿಕವಾಗಿ ಪಿಂಕ್ ಬಸ್ ಗಳನ್ನು ಪರಿಚಯಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಪ್ರಸ್ತುತ ವರ್ಷದಲ್ಲಿ ಒಂದು ಸಾವಿರಕ್ಕೂ ಹೆಚ್ಚಿನ ಬಸ್ ಗಳನ್ನು ಖರೀದಿ ಮತ್ತು ಜಿಸಿಸಿ ಆಧಾರದಲ್ಲಿ ಪಡೆಯುತ್ತಿದೆ. ಅದರಲ್ಲಿ ಕೆಲ ಬಸ್ ಗಳನ್ನು ಪಿಂಕ್ ಬಸ್ ಗಳನ್ನಾಗಿ ಪರಿವರ್ತಿಸಿ ಮಹಿಳಾ ಮೀಸಲು ಬಸ್ ಗಳನ್ನಾಗಿ ಸೇವೆ ನೀಡುವ ಬಗ್ಗೆಯೂ ಚರ್ಚಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.