ಬೆಂಗಳೂರು : ಮೆಟ್ರಿಕ್ ನಂತರದ ವ್ಯಾಸಂಗದಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತೀರ್ಣರಾದ ಪರಿಶಿಷ ಜಾತಿಯ ವಿದ್ಯಾರ್ಥಿಗಳು ಶೇ.60 ರಿಂದ ಶೇ.74.99 ಅಂಕ ಪಡೆದಲ್ಲಿ ರೂ.7000/-ಗಳನ್ನು ಮತ್ತು ಶೇ.75 ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ.15000/- ಗಳನ್ನು ಒಂದು ಬಾರಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಆದೇಶಿಸಲಾಗಿದೆ. ಅದರಂತೆ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತೀರ್ಣರಾದ ಪರಿಶಿಷ್ಟ ಜಾತಿಯ ಎಲ್ಲಾ ವಿಧ್ಯಾರ್ಥಿಗಳಿಗೂ ಯಾವುದೇ ಅದಾಯ ಮಿತಿ ನಿಗದಿಪಡಿಸದ ಪ್ರತಿಯೊಬ್ಬರಿಗೂ ಪ್ರೋತ್ಸಾಹಧನ ನೀಡಲು ಆದೇಶಿಸಲಾಗಿರುತ್ತದೆ.
ಮುಂದುವರೆದು, ಮೇಲೆ ಓದಲಾದ ಕ್ರಮಾಂಕ (2)ರ ಆದೇಶದಲ್ಲಿ ಯಾವುದೇ ಅದಾಯ ಮಿತಿ ನಿಗದಿಪಡಿಸದೆ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮಾ ಭಾರಿಗೆ, ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಲ್ಲಾ ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ Online ಮೂಲಕ ಅರ್ಜಿ ಪಡೆದು ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗಳಿಗೆ DBT ಮುಖಾಂತರ ಪ್ರೋತ್ಸಾಹಧನವನ್ನು ಮಂಜೂರು ಮಾಡಲು ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನದ ಮಾರ್ಗಸೂಚಿಯನುಸಾರ ಈ ಕೆಳಗಿನಂತೆ ಕೋರ್ಸುಗಳನ್ನು ವಿಂಗಡಣೆ ಮಾಡಿ. ವಿದ್ಯಾರ್ಥಿಗಳಿಗಿರಬೇಕಾದ ಅರ್ಹತೆ ಹಾಗೂ ಮಂಜೂರಾತಿ ವಿಧಾನದ ಬಗ್ಗೆ ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಅರ್ಹತೆಗಳು
1) ಪಿ.ಯು.ಸಿ/12th/ITI ಪರೀಕ್ಷೆಗಳ ಸಂಬಂಧ ಪ್ರಥಮ ಪ್ರಯತ್ನದಲ್ಲಿ ಶೇ.75 ಹಾಗೂ ಅದಕ್ಕಿಂತ ಹೆಚ್ಚಿನ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.
2) ಉಳಿದ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪಬ್ಲಿಕ್ ಪರೀಕ್ಷೆ ಇದ್ದಲ್ಲಿ ಪ್ರತಿ ವರ್ಷವೂ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಅಂತಿಮವಾಗಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಈ ಕೋರ್ಸುಗಳಿಗೆ ಸೆಮಿಸ್ಟರ್ ಪದ್ಧತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿಯೇ ಪಾಸಾಗಿರಬೇಕು.
3)ಯಾವುದೇ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್ ಗಳಲ್ಲಿ compartmental / carry over system, and ផ ಬಹುಮಾನದ ಹಣ ಪಡೆಯಲು ಅರ್ಹರಿರುವುದಿಲ್ಲ.
4)ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಮೇಲ್ಕಂಡ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹಾ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಪಡೆಯಲು ಅರ್ಹರಲ್ಲ. 7. ರಾಜ್ಯ / ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಯು.ಜಿ.ಸಿಯಿಂದ ಮಾನ್ಯತೆ ಪಡೆದ ಡೀಮ್ಸ್ ವಿಶ್ವವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ 완 (Autonomous) are Karnataka State Open University, Mysuru ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಮಾತ್ರ ಈ ಯೋಜನೆಗೆ ಅರ್ಹರಿರುತ್ತಾರೆ.
5)ಸಂಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೂ ಸಹ ಈ ಯೋಜನೆಗೆ ಅರ್ಹತೆ ಪಡೆದಿರುತ್ತಾರೆ.
6) KSOU ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಪ್ರೋತ್ಸಾಹಧನ ಯೋಜನೆಗೆ ಅರ್ಹರಿರುತ್ತಾರೆ. KSOU ಹೊರತುಪಡಿಸಿ, ಹೊರರಾಜ್ಯದ ಮುಕ್ತ ವಿಶ್ವವಿದ್ಯಾಲಯಗಳ ಮೂಲಕ ಪದವಿ ಪಡೆದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುವುದಿಲ್ಲ.
7) ITI ಕೋರ್ಸ್ ಸಂಬಂಧ, ಕಡ್ಡಾಯವಾಗಿ SSLC ನಂತರದಲ್ಲಿ ಯಾವುದೇ Year Gap ಇಲ್ಲದೇ 3 ವರ್ಷದ ITI ಗೆ ಸೇರಿ, ಪ್ರಥಮ ಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. PUC ನಂತರದಲ್ಲಿ ITI ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುವುದಿಲ್ಲ.
8) Diploma in Polytechnic ” w SSLC ថថ Year Gap a 3 F Diploma in Polytechnic & ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. PUC ನಂತರದಲ್ಲಿ Diploma in Polytechnic ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುವುದಿಲ್ಲ.
ಸದರಿ ಯೋಜನೆಯಡಿ ಪ್ರೋತ್ಸಾಹಧನ ಪಡೆಯಲು ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 35 ವರ್ಷಗಳನ್ನು ಮೀರಿರಬಾರದು.
9) ಯಾವುದೇ ವರ್ಷದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ಇನ್ನಿತರೆ ಅನಿಯಂತ್ರಿತ ಕಾರಣಗಳಿಂದಾಗಿ, ಪರೀಕ್ಷೆ ರದ್ದುಪಡಿಸಿ ಕೇವಲ ತರಗತಿ ಅಂಕಗಳ ಆಧಾರದ ಮೇಲೆ ಅಂತಿಮ ವರ್ಷದಲ್ಲಿ ತೇರ್ಗಡ ಎಂದು ಘೋಷಿಸಿದ್ದರೆ, ಅಂತಹ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕೆ ಅರ್ಹತೆ ಪಡೆದಿರುವುದಿಲ್ಲ.
10) ಸರ್ಕಾರದಿಂದ ಮಾನ್ಯತೆ ಪಡೆಯದಿರುವ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸದರಿ ಯೋಜನೆಯಡಿ ಅರ್ಹರಿರುವುದಿಲ್ಲ.