ಮೂರು ದಿನಗಳ ಹಿಂದಷ್ಟೇ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 250ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ರೈಲು ಹಳಿತಪ್ಪಿದೆ.
ಸರಕು ಸಾಗಣೆ ರೈಲಿನ ಐದು ಬೋಗಿಗಳು ಹಳಿ ತಪ್ಪಿವೆ ಎನ್ನಲಾಗಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಹೇಳಲಾಗಿದೆ.
ಒಡಿಶಾದ ಬಾರ್ಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸರಕು ಸಾಗಣೆ ರೈಲಿನಲ್ಲಿ ಲೈಮ್ ಸ್ಟೋನ್ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.