ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದ್ದು, (ಆಗಸ್ಟ್ 1) ನಾಳೆಯಿಂದ ರಿಂದ ಅನಿರ್ದಿಷ್ಟಾವಧಿ ಕಾಲ ಮುಷ್ಕರ ನಡೆಸಲು ಡಯಾಲಿಸಿಸ್ ಸಿಬ್ಬಂದಿ ಮುಂದಾಗಿದ್ದಾರೆ.
ಕಳೆದ ಎರಡು ವರ್ಷಗಳಿಂದ ಸಕಾಲಕ್ಕೆ ವೇತನ ಮತ್ತು ಅಗತ್ಯ ಸೌಲಭ್ಯ ನೀಡದ ಕಾರಣ ಮುಷ್ಕರ ಕೈಗೊಳ್ಳಲಾಗಿದೆ. ರಾಜ್ಯದ 167 ಡಯಾಲಿಸಿಸ್ ಕೇಂದ್ರಗಳಲ್ಲಿ 2017 ರಿಂದ 900 ಸಿಬ್ಬಂದಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಎರಡು ವರ್ಷಗಳಿಂದ ಇಎಸ್ಐ, ಪಿಎಫ್, ಮಾತೃತ್ವ ರಜೆ ನೀಡಿಲ್ಲ. ವೇತನ ಹೆಚ್ಚಳ ಮಾಡಿಲ್ಲ. ಸಕಾಲಕ್ಕೆ ವೇತನ ಕೂಡ ಕೊಡುತ್ತಿಲ್ಲ ಎಂದು ದೂರಲಾಗಿದೆ.
ಬಾಕಿ ವೇತನ ಪಾವತಿ, ವೇತನ ಪರಿಷ್ಕರಣೆ, ಮಾತೃತ್ವ ರಜೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಆಗಸ್ಟ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು ಎಂದು ರಾಜ್ಯ ಡಯಾಲಿಸಿಸ್ ನೌಕರರ ಸಂಘ ಹೇಳಿದೆ.