ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಶಾಲಾ ನೌಕರರ ಧರಣಿ ಆರಂಭವಾಗಿದೆ.
ಹೌದು, ಹೊರಗುತ್ತಿಗೆ ಪದ್ಧತಿ ಕೈಬಿಡಬೇಕು ಹಾಗೂ ಇಲಾಖೆಗಳಿಂದ ನೇರವಾಗಿ ವೇತನ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಸಾವಿರಾರು ನೌಕರರು ಧರಣಿ ಆರಂಭಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆ ಗಳಿಂದ ಆಗಮಿಸಿದ ಸಾವಿರಾರು ನೌಕರರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಿದ್ದಾರೆ.
ಬೇಡಿಕೆ ಈಡೇರಿಕೆ ಬಗ್ಗೆ ಸರ್ಕಾರ ಲಿಖಿತ ಭರವಸೆ ನೀಡುವವರೆಗೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಹಲವು ಹೊರಗುತ್ತಿಗೆ ಸಿಬ್ಬಂದಿ ಯಾವುದೇ ಸೌಲಭ್ಯವಿಲ್ಲದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಧಿಕಾರಿಗಳು ತಮ್ಮ ಮನಸ್ಸಿಗೆ ತೋಚಿದಂತೆ ಉದ್ಯೋಗಿಗ ಳನ್ನು ಕೆಲಸದಿಂದ ವಜಾ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.