alex Certify JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಬಳ್ಳಾರಿಯಲ್ಲಿ ನಾಳೆ ‘ಉದ್ಯೋಗ ಮೇಳ’ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಬಳ್ಳಾರಿಯಲ್ಲಿ ನಾಳೆ ‘ಉದ್ಯೋಗ ಮೇಳ’ ಆಯೋಜನೆ

ಬಳ್ಳಾರಿ : ಬಳ್ಳಾರಿಯಲ್ಲಿ ಇಂದಿನಿಂದ ನಾಳೆವರೆಗೆ (ಜ.05 ಮತ್ತು 06 ರಂದು) ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಬಹುದಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಎರಡು ದಿನಗಳ “ಮಿನಿ ಉದ್ಯೋಗಮೇಳ”ವನ್ನು ಜ.05 ಮತ್ತು 06 ರಂದು ಬೆಳಿಗ್ಗೆ 10 ಗಂಟೆಯಿಂದ ಹಳೆಯ ತಹಶೀಲ್ದಾರರ ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದೆ.

ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳಾದ ಅಮೆಜಾನ್ ಲಿಮಿಟೆಡ್ ಹಾಗು ವಿಸ್ಟ್ರಾನ್ ಇನ್ಪೋಕಂ ಕಂಪನಿಗಳು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ ಡಿಪ್ಲೋಮಾ ಮತ್ತು ಪದವಿ ಮುಗಿಸಿದ ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ ವಿವರಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಜಿಲ್ಲೆಯ ನಿರುದ್ಯೋಗಿ ಯುವಕರು ಉದ್ಯೋಗ ಮೇಳವನ್ನು ಸದುಪಯೋಗ ಮಾಡಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ದೂ:08392-273988, 08392-294230 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...