ಚಿಕ್ಕಮಗಳೂರು : ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ.ಮುಳ್ಳಯ್ಯನಗಿರಿಗೆ ತೆರಳುವ ರಸ್ತೆಯ ಮೊದಲ ತಿರುವಿನಲ್ಲಿ ಮತ್ತೆ ಗುಡ್ಡ ಕುಸಿದಿದ್ದು, ರಸ್ತೆ ಸಂಚಾರ ಸ್ಥಗಿತವಾಗಿದೆ.
ಕಳೆದ ಮೂರು ದಿನಗಳಿಂದ ನಿರಂತರವಾಗಿ ಗುಡ್ಡ ಕುಸಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ ಬೆಟ್ಟಕ್ಕೆ ಹೋಗುವವರಿಗೆ ಜಿಲ್ಲಾಡಳಿತ ಪ್ರವೇಶ ನಿರ್ಬಂಧ ಹೇರಿದೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗುತ್ತಿರುವ ಹಿನ್ನೆಲೆ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವೇಶ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗಿದ್ದು, ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನಹಳ್ಳ, ಕೆಮ್ಮಣ್ಣುಗುಂಡಿ, ಸೀತಾಳಯ್ಯನಗಿರಿ ಪ್ರವೇಶಕ್ಕೆ ಕೂಡ ನಿರ್ಬಂಧಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಳ್ಳಯ್ಯನಗಿರಿ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಈ ಹಿನ್ನೆಲೆ ಜೆಸಿಬಿಗಳಿಂದ ಮಣ್ಣು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಮುಳ್ಳಯ್ಯನಗಿರಿ ಬೆಟ್ಟಕ್ಕೆ ತೆರಳದಂತೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದು, ಮುಂದಿನ ಆದೇಶದವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಮುಳ್ಳಯ್ಯನಗಿರಿ ಭಾರತದ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಶ್ಚಿಮ ಘಟ್ಟಗಳ ಬಾಬಾ ಬುಡನ್ಗಿರಿ ಬೆಟ್ಟಸಾಲಿನಲ್ಲಿರುವ ಒಂದು ಶಿಖರ. 1923 ಮೀಟರ್ (೬೩೧೭ ಅಡಿ) ಎತ್ತರದಲ್ಲಿರುವ ಮುಳ್ಳಯ್ಯನ ಗಿರಿ ಕರ್ನಾಟಕದ ಅತ್ಯುನ್ನತ ಪರ್ವತಶಿಖರವಾಗಿದೆಮಳೆಗಾಲದಲ್ಲಿ ಇಲ್ಲಿಗೆ ಭೇಟಿ ನೀಡಿದರೆ ಇಲ್ಲಿಯ ಅನುಭವವೇ ಬೇರೆ ಹಾಗಾಗಿ ಸಾಕಷ್ಟು ಪ್ರವಾಸಿಗರು, ಚಾರಣಿಗರು ಈ ಸಮಯದಲ್ಲಿ ಭೇಟಿ ನೀಡುವುದರಿಂದ ಚಿಕ್ಕಮಗಳೂರು ರಸ್ತೆ ಸದಾ ವಾಹನಗಳಿಂದ ತುಂಬಿರುತ್ತದೆ.