ಆಂಧ್ರಪ್ರದೇಶ : ಹೊಸ ವರ್ಷದ ದಿನವೇ ‘ISRO’ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದು, ಎಕ್ಸ್ಪೋಸ್ಯಾಟ್ ಯಶಸ್ವಿ ಉಡಾವಣೆ ಮಾಡಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ – ಪಿಎಸ್ಎಲ್ವಿ-ಸಿ 58 ಅನ್ನು ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಗಿದ್ದು, ಈ ಮೂಲಕ ಇಸ್ರೋ ಹೊಸ ವರ್ಷದ ದಿನವೇ ಇತಿಹಾಸ ಸೃಷ್ಟಿಸಿದೆ. ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್( X-Ray Polarimeter Satellite) ಉಪಗ್ರಹ ಎಕ್ಸ್ಪೋಸ್ಯಾಟ್ (XPoSat) ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದ್ದು, ಇದರ ಜೊತೆಗೆ ಪಿಎಸ್ಎಲ್ವಿ ಇತರ ಹತ್ತು ಉಪಗ್ರಹಗಳನ್ನು ಹೊತ್ತೊಯ್ದಿದೆ.
ಎಕ್ಸ್ ಪೋಸ್ಯಾಟ್ ಬಾಹ್ಯಾಕಾಶದಲ್ಲಿ ತೀವ್ರವಾದ ಎಕ್ಸ್-ರೇ ಮೂಲಗಳ ಧ್ರುವೀಕರಣವನ್ನು ತನಿಖೆ ಮಾಡುವ ಗುರಿಯನ್ನು ಹೊಂದಿದೆ.