ಬೆಂಗಳೂರು : ಪರೀಕ್ಷೆಗಳಿಗೆ ಹೆದರಿ ಬಿಎಸ್ಸಿ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ವಿದ್ಯಾರ್ಥಿ ಆರು ಅಂತಸ್ತಿನ ಕಟ್ಟಡದಿಂದ ಜಿಗಿಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತನನ್ನು 20 ವರ್ಷದ ಸತ್ಯಂ ಸುಮನ್ ಎಂದು ಗುರುತಿಸಲಾಗಿದೆ. ಅವರು ಬಿಹಾರ ಮೂಲದವರು. ಈ ಘಟನೆ ಶನಿವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಉಡುಪಿ ಜಿಲ್ಲೆಯ ಮಣಿಪಾಲ್ ವಿಶ್ವವಿದ್ಯಾಲಯದಲ್ಲಿ ಶನಿವಾರ ಪರೀಕ್ಷೆಗಳು ನಡೆಯುತ್ತಿದ್ದಾಗ, ಸತ್ಯಂ ಮಧ್ಯಾಹ್ನದ ಸುಮಾರಿಗೆ ಕಟ್ಟಡದ ಆರನೇ ಮಹಡಿಗೆ ಹೋಗಿದ್ದಾನೆ. ಕೆಲವು ವಿದ್ಯಾರ್ಥಿಗಳು ಅವನನ್ನು ನೋಡಿ ಕೆಳಗಿಳಿಯುವಂತೆ ಸಮಾಧಾನಪಡಿಸಲು ಪ್ರಯತ್ನಿಸಿದರು. ಆದರೆ ಇದ್ಯಾವುದಕ್ಕೂ ಕೇರ್ ಮಾಡದೇ ಸತ್ಯಂ ಕಟ್ಟಡದಿಂದ ಜಿಗಿದಿದ್ದಾನೆ. ಕೂಡಲೇ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರೂ ಅಷ್ಟರಲ್ಲೇ ಮೃತಪಟ್ಟಿದ್ದರು. ಸತ್ಯಂ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ ನಲ್ಲಿ ಓದುತ್ತಿದ್ದರು.