ಬೆಳಗಾವಿ : ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಮಹಿಳೆಯನ್ನು 2ಬಾರಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ನಡೆದಿದೆ.
ಜಮೀನಿನಲ್ಲಿ ವಿಚಾರಕ್ಕೆ ಗಲಾಟೆ ನಡೆದಿದ್ದು, ಆರೋಪಿಗಳೆಲ್ಲಾ ಸೇರಿ ಮಹಿಳೆಯನ್ನು ಅರೆಬೆತ್ತಲೆ ನಡೆಸಿ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ 20 ಮಂದಿ ವಿರುದ್ಧ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ.
ನವೆಂಬರ್ 21 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 31 ರಂದು ಎಫ್ ಐ ಆರ್ ದಾಖಲಿಸಲಾಗಿದ್ದು, ಬೈಲಹೊಂಗಲ ಪೊಲೀಸ್ ಠಾಣೆ ಪೊಲೀಸರು ಪ್ರಕರಣವನ್ನು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದಾರೆ. ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆ, ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ನಡುವೆ ಮತ್ತೊಂದು ಇಂತಹದ್ದೇ ಘಟನೆ ನಡೆದಿದೆ.