ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಶಾಲಾ ಬಾಲಕಿಯರು ಶೌಚಾಲಯ ಸ್ವಚ್ಛಗೊಳಿಸಿದ ಮತ್ತೊಂದು ಘಟನೆ ಬಯಲಾಗಿದೆ.
ದಾವಣಗೆರೆ ತಾಲೂಕಿನ ಮೆಳ್ಳೆಕಟ್ಟೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ 10ಕ್ಕೂ ಅಧಿಕ ಬಾಲಕಿಯರು ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎಂದು ಹೇಳಲಾಗಿದ್ದು, ವಿಡಿಯೋ ವೈರಲ್ ಆಗಿದೆ. ಬಕೆಟ್ ನಲ್ಲಿ ನೀರು ತಂದು ಪೊರಕೆಯಿಂದ ಶೌಚಾಲಯ ಸ್ವಚ್ಚ ಗೊಳಿಸುತ್ತಿರುವ ಬಾಲಕಿಯ ವಿಡಿಯೋ ವೈರಲ್ ಆಗಿದೆ. ಘಟನೆ ಕುರಿತು ಶಾಲೆಯ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಶಾಲೆಗಳಲ್ಲಿ ಮಕ್ಕಳ ಕಡೆಯಿಂದ ಶೌಚಾಲಯ ಸ್ವಚ್ಛಗೊಳಿಸದಂತೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಆದರೆ ಯಾವುದಕ್ಕೂ ಡೋಂಟ್ ಕೇರ್ ಎಂಬಂತೆ ಶಿಕ್ಷಕರು ವರ್ತಿಸುತ್ತಿದ್ದು, ಪೋಷಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.