ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಕುದಪಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮಕ್ಕಳು ಶಾಲೆಯ ಶೌಚಾಲಯ ಸ್ವಚ್ಚ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೋಷಕರು ಶಾಲೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಷಕರ ಆಕ್ರೋಶದ ಹಿನ್ನೆಲೆ ಬಿಇಒ ನರೇಂದ್ರ ಕುಮಾರ್ ಅವರು ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿದ್ದಾರೆ.
ಶಾಲೆಗಳಲ್ಲಿ ಮಕ್ಕಳ ಕಡೆಯಿಂದ ಶೌಚಾಲಯ ಸ್ವಚ್ಛಗೊಳಿಸದಂತೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಆದರೆ ಯಾವುದಕ್ಕೂ ಡೋಂಟ್ ಕೇರ್ ಎಂಬಂತೆ ಶಿಕ್ಷಕರು ವರ್ತಿಸುತ್ತಿದ್ದು, ಪೋಷಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.