ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಮಾಡಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿಯ ಮೌಲಾನಾ ಆಜಾದ್ ಮಾಡೆಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಮುಖ್ಯ ಶಿಕ್ಷಕಿ ಜೋಹರ ಜಬೀನ ಎಂಬುವವರು ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದು ಹಾಗೂ ತಮ್ಮ ಮನೆಯ ಕೆಲಸಕ್ಕೂ ಬಳಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಶಾಲೆಗಳಲ್ಲಿ ಮಕ್ಕಳ ಕಡೆಯಿಂದ ಶೌಚಾಲಯ ಸ್ವಚ್ಛಗೊಳಿಸದಂತೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಆದರೆ ಯಾವುದಕ್ಕೂ ಡೋಂಟ್ ಕೇರ್ ಎಂಬಂತೆ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಕಲಬುರಗಿಯ ಮೌಲಾನಾ ಆಜಾದ್ ಮಾಡೆಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರ್ಥಿಗಳನ್ನು ಶೌಚಾಲಯ ಕ್ಲಿನಿಂಗ್ ಮಾಡಲು ಬಳಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಮನೆಯ ಕೆಲಸಕ್ಕೂ ಶಾಲಾ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ರೋಜಾ ಪೊಲೀಸ್ ಠಾಣೆಯಲ್ಲಿ ಮುಖ್ಯ ಶಿಕ್ಷಕಿ ಜೋಹರಾ ವಿರುದ್ಧ ದೂರು ದಾಖಲಾಗಿದೆ.