
ಹಾಸನ: ಧಾರಾಕಾರ ಮಳೆಯಿಂದಾಗಿ ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಭೂಕುಸಿತವುಂಟಾಗಿದೆ. ವಾಹನ ಸವಾರರು ಆತಂಕದಲ್ಲಿ ಸಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ.ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತವಾಗಿದೆ. ತಡೆಗೋಡೆ ನಿರ್ಮಾಣ ಮಾಡದೇ ರಸ್ತೆ ಅಗಲೀಕರಣ ಮಾಡಿರುವುದರಿಂದ ಭೂಕುಸಿತವಾಗಿದೆ ಎಂದು ಸ್ಥಳೀಯರು ಕಿಡಿ ಕಾರಿದ್ದಾರೆ.
ಅವೈಜ್ಞಾನಿಕ ರಸ್ತೆ ಕಾಮಗಾರಿಗೆ ವಾಹನ ಸವಾರರು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುರಂತ ಸಂಭವಿಸುವ ಮುನ್ನ ಈಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ.