
ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರಾಜ್ ಕುಮಾರ್ ಅಭಿನಯದ ನಿರೀಕ್ಷಿತ ‘ಯುವ’ ಚಿತ್ರದ ”ಅಪ್ಪುಗೆ” ಎಂಬ ಲಿರಿಕಲ್ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸಂಜೆ 6:00 ಗಂಟೆಗೆ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ.
ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದು, ಯುವರಾಜ್ ಕುಮಾರ್ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ಅಭಿನಯಿಸಿದ್ದಾರೆ. ಇನ್ನುಳಿದಂತೆ ಅಚ್ಯುತ್ ಕುಮಾರ್, ಸುಧಾರಾಣಿ, ಕಿಶೋರ್, ಉಳಿದ ಪಾತ್ರವರ್ಗದಲ್ಲಿದ್ದಾರೆ. ಆಶಿಕ್ ಕುಸುಗೊಳ್ಳಿ ಸಂಕಲನ, ಶ್ರೀಶ ಕುಡುವಳ್ಳಿ ಛಾಯಾಗ್ರಹಣ,ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.
