ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಡ್ಯಾನ್ಸ್ ಕಿಂಗ್ ಪ್ರಭುದೇವ ಅಭಿನಯದ ‘ಕರಟಕ ದಮನಕ’ ಚಿತ್ರ ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿದ್ದು, ಇದರ ಹಾಡುಗಳಂತೂ ಎಲ್ಲರ ಬಾಯಲ್ಲಿ ನಲಿದಾಡುತ್ತಲೇ ಇವೆ. ಈ ಸಿನಿಮಾದ ಮತ್ತೊಂದು ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಮನುಜಾ ನಿಂದ್ಯಾವ ಊರು’ ಎಂಬ ಈ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿಯಾಗಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ. ಯೋಗರಾಜ್ ಭಟ್ ಸಾಹಿತ್ಯವಿದೆ.
ಈ ಚಿತ್ರವನ್ನು ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಡ್ಯಾನ್ಸ್ ಕಿಂಗ್ ಪ್ರಭುದೇವ, ನಿಶ್ವಿಕ ನಾಯ್ಡು, ಮತ್ತು ಪ್ರಿಯಾ ಆನಂದ್ ಪ್ರಮುಖ ಪಾತ್ರದಲ್ಲಿದ್ದಾರೆ. ಕೆಎಂ ಪ್ರಕಾಶ್ ಸಂಕಲನ, ಸಂತೋಷ್ ರಾಯ್ ಪತಾಜೆ ಛಾಯಾಗ್ರಹಣವಿದೆ.