ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಹಣಕಾಸಿನ ವಿಚಾರಕ್ಕೆ ವ್ಯಕ್ತಿಯ ಬರ್ಬರ ಕೊಲೆಯಾಗಿದೆ.
ಆಂಧ್ರಹಳ್ಳಿಯ ಬಳಿ ಅಭಿಷೇಕ್ (36) ಎಂಬುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅಭಿಷೇಕ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಪೊಲೀಸರು ಆರೋಪಿಗಳಾದ ಕಾರ್ತಿಕ್, ಚೇತನ್ ಎಂಬುವವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.