ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಿದ್ದು, ನವೆಂಬರ್ 30 ರಿಂದ ಡಯಾಲಿಸಿಸ್ ಸಿಬ್ಬಂದಿ ಕೆಲಸ ಬಂದ್ ಮಾಡಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.
ನವೆಂಬರ್ 30 ರಂದು ರಾಜ್ಯಾದ್ಯಂತ 202 ಡಯಾಲಿಸಿಸ್ ಕೇಂದ್ರಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಮುಂದಾಗಿದ್ದು, ರೋಗಿಗಳು ಪರದಾಡಲಿದ್ದಾರೆ. ವೇತನ ಹೆಚ್ಚಳ ಮಾಡುವಂತೆ ಕೋರಿ ಸರ್ಕಾರದ ವಿರುದ್ಧ ಡಯಾಲಿಸಿಸ್ ಸಿಬ್ಬಂದಿಗಳು ಪ್ರತಿಭಟನೆಗೆ ಕರೆ ನೀಡಲಾಗಿದೆ.
ಈ ಹಿಂದೆ ಡಯಾಲಿಸಿಸ್ ಕೇಂದ್ರ ನಿರ್ವಹಣೆ ಮಾಡುತ್ತಿದ್ದ ಬಿಆರ್ಎಸ್ ಸಂಸ್ಥೆ 2021ರಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗದ ಕಾರಣ ನಿರ್ವಹಣೆಯಿಂದ ಹಿಂದೆ ಸರಿಯಿತು. ನಂತರದಲ್ಲಿ ಯಾವುದೇ ಟೆಂಡರ್ ಆಗದೇ ಕೋಲ್ಕತ್ತ ಮೂಲದ ESKAG ಸಂಜೀವಿನಿಗೆ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ.