alex Certify ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ : ನ. 30 ರಿಂದ ರಾಜ್ಯಾದ್ಯಂತ ಡಯಾಲಿಸಿಸ್ ಕೇಂದ್ರಗಳು ಬಂದ್! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ : ನ. 30 ರಿಂದ ರಾಜ್ಯಾದ್ಯಂತ ಡಯಾಲಿಸಿಸ್ ಕೇಂದ್ರಗಳು ಬಂದ್!

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಿದ್ದು, ನವೆಂಬರ್​ 30 ರಿಂದ ಡಯಾಲಿಸಿಸ್‌ ಸಿಬ್ಬಂದಿ ಕೆಲಸ ಬಂದ್‌ ಮಾಡಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.

ನವೆಂಬರ್​ 30 ರಂದು ರಾಜ್ಯಾದ್ಯಂತ 202 ಡಯಾಲಿಸಿಸ್​ ಕೇಂದ್ರಗಳನ್ನು ಬಂದ್‌ ಮಾಡಿ ಪ್ರತಿಭಟನೆಗೆ ಮುಂದಾಗಿದ್ದು, ರೋಗಿಗಳು ಪರದಾಡಲಿದ್ದಾರೆ.  ವೇತನ ಹೆಚ್ಚಳ ಮಾಡುವಂತೆ ಕೋರಿ ಸರ್ಕಾರದ ವಿರುದ್ಧ ಡಯಾಲಿಸಿಸ್‌ ಸಿಬ್ಬಂದಿಗಳು ಪ್ರತಿಭಟನೆಗೆ ಕರೆ ನೀಡಲಾಗಿದೆ.

ಈ ಹಿಂದೆ ಡಯಾಲಿಸಿಸ್ ಕೇಂದ್ರ ನಿರ್ವಹಣೆ ಮಾಡುತ್ತಿದ್ದ ಬಿಆರ್​​ಎಸ್ ಸಂಸ್ಥೆ 2021ರಲ್ಲಿ ಸರ್ಕಾರದಿಂದ ಹಣ ಬಿಡುಗಡೆ ಆಗದ ಕಾರಣ ನಿರ್ವಹಣೆಯಿಂದ ಹಿಂದೆ ಸರಿಯಿತು. ನಂತರದಲ್ಲಿ ಯಾವುದೇ ಟೆಂಡರ್ ಆಗದೇ ಕೋಲ್ಕತ್ತ ಮೂಲದ ESKAG ಸಂಜೀವಿನಿಗೆ ನಿರ್ವಹಣೆ ಜವಾಬ್ದಾರಿ ವಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...