ಲೋಕಸಭೆ ಸದಸ್ಯ ಸ್ಥಾನದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅನರ್ಹತೆ ಮತ್ತು 2 ವರ್ಷ ಶಿಕ್ಷೆ ಸಮಯದಲ್ಲಿ, 2019 ರಲ್ಲಿ ಕೇರಳದ ಅದೇ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಇನ್ನೊಬ್ಬ ‘ರಾಹುಲ್ ಗಾಂಧಿ’ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಂಡಿದ್ದಾರೆ.
ಮಾರ್ಚ್ 29 ರಂದು ಭಾರತದ ಚುನಾವಣಾ ಆಯೋಗವು (ಇಸಿಐ) ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಕಳುಹಿಸಿದ ಪ್ರಜಾಪ್ರತಿನಿಧಿ ಕಾಯ್ದೆ, 1951 ರ ಸೆಕ್ಷನ್ 10 ಎ ಅಡಿಯಲ್ಲಿ ಅನರ್ಹಗೊಂಡ ವ್ಯಕ್ತಿಗಳ ಸಾಮಾನ್ಯ ಪಟ್ಟಿಯಲ್ಲಿ ರಾಹುಲ್ ಗಾಂಧಿ ಕೆ.ಇ. ಕೊಟ್ಟಾಯಂ ಹೆಸರನ್ನು ಒಳಗೊಂಡಿತ್ತು. ಪಟ್ಟಿಯ ಪ್ರಕಾರ ಅವರನ್ನು ಮೂರು ವರ್ಷಗಳ ಅವಧಿಗೆ ಸೆಪ್ಟೆಂಬರ್ 9, 2021 ರಂದು ಅನರ್ಹಗೊಳಿಸಲಾಗಿದೆ.
ಸೆಕ್ಷನ್ 10ಎ ಅಡಿಯಲ್ಲಿ, ಚುನಾವಣೆಗೆ ಸ್ಪರ್ಧಿಸಿದ ನಂತರ ಚುನಾವಣಾ ವೆಚ್ಚದ ಖಾತೆಯನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಲು ವಿಫಲರಾದವರನ್ನು ಮೂರು ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗುತ್ತದೆ.
2021 ರಂದು 33 ವರ್ಷ ವಯಸ್ಸಿನ ರಾಹುಲ್ ಗಾಂಧಿ ಕೆ ಇ ಅವರು ಲೋಕಸಭೆ ಚುನಾವಣೆಯಲ್ಲಿ ವಯನಾಡ್‌ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.