alex Certify ಡಿ. 16 ರಿಂದ ಡಿ -ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ. 16 ರಿಂದ ಡಿ -ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ನಾಳೆಯಿಂದ ಡಿ -ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪ್ರಸಕ್ತ ಸಾಲಿಗೆ ಡಿಪ್ಲೋಮಾ ಲ್ಯಾಟರಲ್ ಪ್ರವೇಶಾತಿ ಮೂಲಕ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಮತ್ತೊಂದು ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಡಿಸೆಂಬರ್ 16ರಂದು ಆರಂಭವಾಗಲಿದೆ ಎಂದು ಕೆಇಎ ತಿಳಿಸಿದೆ.

ಮೊದಲ ಎರಡು ಸುತ್ತುಗಳಲ್ಲಿ ಯಾವುದೇ ಸೀಟು ಪಡೆಯದಿರುವ ಅಭ್ಯರ್ಥಿಗಳಿಗೆ ಎರಡನೇ ಸುತ್ತಿನ ನಂತರ ಉಳಿದಿರುವ ಸೀಟುಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಸೀಟು ರದ್ದುಪಡಿಸಿಕೊಳ್ಳಲು ಅಪೇಕ್ಷಿಸುವ ಅಭ್ಯರ್ಥಿಗಳು ಆಯ್ಕೆಗಳನ್ನು ದಾಖಲಿಸಲು ನಿಗದಿಪಡಿಸಿರುವ ಗಡುವಿನ ಡಿಸೆಂಬರ್ 19ರ ಬೆಳಿಗ್ಗೆ 11 ಗಂಟೆ ಒಳಗೆ 5000 ದಂಡದ ರೂಪದಲ್ಲಿ ಡಿಡಿ ಮೂಲಕ ಸಲ್ಲಿಸಬೇಕಿದೆ. ಮಾಹಿತಿಗೆ ಪ್ರಾಧಿಕಾರದ ವೆಬ್ಸೈಟ್ ಗಮನಿಸುವಂತೆ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...