ಬೆಂಗಳೂರು : ನಟ ದರ್ಶನ್ ಗೆ ಪೊಲೀಸರು ಮತ್ತೊಂದು ಶಾಕ್ ನೀಡಿದ್ದು, ಗನ್ ಲೈಸೆನ್ಸ್ ರದ್ದು ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ.
ಈಗಾಗಲೇ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಜಾಮೀನು ರದ್ದುಮಾಡುವಂತೆ ಪೊಲೀಸರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ಬೆನ್ನಲ್ಲೇ ದರ್ಶನ್ ಬಳಿಯಿದ್ದ ಗನ್ ಲೈಸೆನ್ಸ್ ರದ್ದು ಮಾಡಲು ಪೊಲೀಸ್ ಇಲಾಖೆ ಮುಂದುವರೆದಿದೆ.
ನೀವು ಕೊಲೆ ಪ್ರಕರಣದ ಆರೋಪಿಯಾಗಿದ್ದೀರಿ, ಜಾಮೀನಿನ ಮೇಲೆ ಹೊರಗಿರುವುದರಿಂದ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಆದ್ದರಿಂದ ನಿಮ್ಸ್ ಲೈಸೆನ್ಸ್ ರದ್ದುಪಡಿಸಬೇಕಾಗಿದೆ ಎಂದು ಪೊಲೀಸರು ನೋಟಿಸ್ ನೀಡಿದ್ದಾರೆ.