ಬೆಂಗಳೂರು : ದಿನನಿತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆ ಬೆಂಗಳೂರಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ‘ನಮ್ಮ ಮೆಟ್ರೋ’ ರೈಲಿನ ಟಿಕೆಟ್ ದರ ಹೆಚ್ಚಳವಾಗಲಿದೆ ಎಂದು ತಿಳಿದು ಬಂದಿದೆ.
ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮೆಟ್ರೋ ರೈಲ್ವೇ ನಿಲ್ದಾಣದಲ್ಲಿ ಕೆಲವು ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲಿದೆ. ರೈಲ್ವೇ ನಿಲ್ದಾಣದಲ್ಲಿ ಪ್ಲಾಟ್ ಫಾರಂ ಸ್ಕ್ರೀನ್ ಅಳವಡಿಸಲು ಚಿಂತನೆ ನಡೆಸಲಾಗಿದೆ. ಇದಕ್ಕೆ 6-7 ಕೋಟಿ ವೆಚ್ಚ ಆಗಲಿದ್ದು, ಆದ್ದರಿಂದ ಬಿಎಂಆರ್ ಸಿ ಎಲ್ ಟಿಕೆಟ್ ದರ ಏರಿಕೆ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಎಲ್ಲಾ ನಿಲ್ದಾಣಗಳಲ್ಲಿ ಇದನ್ನು ಮಾಡಬೇಕೆಂದರೆ ಹೆಚ್ಚಿನ ಹಣ ಬೇಕಾಗುತ್ತದೆ. ಆದ್ದರಿಂದ ಟಿಕೆಟ್ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದು ಬಿಎಂಆರ್ ಸಿಎಲ್ (BMRCL) ತಿಳಿಸಿದೆ.