ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತೆಂಗಿನಕಾಯಿ ದರ ಭಾರಿ ಏರಿಕೆಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.
ಎಳನೀರು ಭರ್ಜರಿ ಮಾರಾಟವಾದ ಹಿನ್ನೆಲೆ ತೆಂಗಿನಕಾಯಿ ಕಡಿಮೆಯಾಗಿದ್ದು, ಈ ಹಿನ್ನೆಲೆ ದರ ಏರಿಕೆಯಾಗಿದೆ.
ಈ ಮೊದಲು ಒಂದು ತೆಂಗಿನಕಾಯಿಗೆ 20, 25, 30 ರೂ. ದರ ಇತ್ತು. ಈಗ 65, ರೂ.ವರೆಗೆ ಮಾರಾಟವಾಗುತ್ತಿದೆ. ಕೆಜಿಗೆ 32 -33 ಗೆ ಮಾರಾಟವಾಗುತ್ತಿದ್ದ ತೆಂಗಿನಕಾಯಿ ಈಗ 60 ರೂ.ಗೆ ತಲುಪಿದೆ. ತೆಂಗಿನ ಇಳುವರಿ ಕಡಿಮೆಯಾಗಿದ್ದು, ಎಳನೀರಿಗೂ ಭಾರಿ ಪ್ರಮಾಣದಲ್ಲಿ ಕೊಯ್ಲು ಮಾಡುವುದರಿಂದ ಬೆಲೆ ಏರಿಕೆಗೆ ಕಾರಣವಾಗಿದೆ ಎನ್ನಲಾಗಿದೆ.