ಚಿಕ್ಕೋಡಿ : ಜಿಲ್ಲೆಯಲ್ಲಿ ಬರಗಾಲದಿಂದ ಜನ ಕಂಗೆಟ್ಟಿದ್ದು , ಇದರ ನಡುವೆ ರೈತರಿಗೆ ಮತ್ತೊಂದು ಶಾಕ್ ನೀಡಲು ಸರ್ಕಾರ ಸಿದ್ದತೆ ನಡೆಸಿದೆ.
ವಾರದಲ್ಲಿ ಒಂದು ದಿನ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಕೃಷ್ಣಾ ನದಿ ದಂಡೆಯ ವಿದ್ಯುತ್ ಕಡಿತಕ್ಕೆ ಚಿಂತನೆ ನಡೆಸಲಾಗಿದ್ದು, ಬೇಸಿಗೆ ವೇಳೆ ನೀರು ಉಳಿವಿಗಾಗಿ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ, ರೈತರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ. ಈಗಾಗಲೇ ಬೆಳೆ ನಷ್ಟದಲ್ಲಿರುವ ರೈತರಿಗೆ ಮತ್ತೊಂದು ಶಾಕ್ ಎದುರಾಗಿದೆ.
ಇನ್ನೂ, ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕು ಹಾಗೂ ಲೋಡ್ ಶೆಡ್ಡಿಂಗ್ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ.