ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ನಂದಿನಿ ಹಾಲಿನ ದರ ಹೆಚ್ಚಳಕ್ಕೆ KMF ಚಿಂತನೆ ನಡೆಸಿದೆ ಎನ್ನಲಾಗಿದೆ.
ಆರ್ಥಿಕ ನಷ್ಟದ ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್ ಮನವಿ ಮಾಡಿತ್ತು. ಆದರೆ ಸರ್ಕಾರ ಕಳೆದ ಅಕ್ಟೋಬರ್ ತಿಂಗಳಿನಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಿತ್ತು. ಇದೀಗ ಮತ್ತೆ ಹಾಲಿನ ದರ ಹೆಚ್ಚಳ ಮಾಡಲು ಕೆಎಂಎಫ್ ಚಿಂತನೆ ನಡೆಸಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ದವಾಗಿದೆ.
ಮುಂದಿನ ವರ್ಷ ಅಂದರೆ ಜನವರಿ 2024 ರಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ. ಜನವರಿ ಅಥವಾ ಫೆಬ್ರವರಿಯಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆಯಿದೆ.
ಕಳೆದ ಸೆಪ್ಟೆಂಬರ್ ನಲ್ಲಿ ಪ್ರತಿ ಲೀಟರ್ ಹಾಲಿನ ದರ 5 ರೂಪಾಯಿ ಹೆಚ್ಚಳ ಮಾಡುವಂತೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿತ್ತು, ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಿ 5 ರೂಪಾಯಿ ಬದಲಿಗೆ 3 ರೂ. ಹೆಚ್ಚಳಕ್ಕೆ ಸರ್ಕಾರ ಸಮ್ಮತಿ ನೀಡಿತ್ತು. ಇದೀಗ ಮತ್ತೆ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದ್ದು, ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ ಬೀಳಲಿದೆ.