ನವದೆಹಲಿ : ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ಮುಂದಿನ 15 ದಿನ ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ CWRC ಸೂಚನೆ ನೀಡಿದೆ.
ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆದಿದ್ದು, ಕರ್ನಾಟಕ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುತ್ತಿದೆ. ಅಕ್ಟೋಬರ್ ಅಂತ್ಯದವರೆಗೆ ನೀರು ಹರಿಸಲು CWRC ಆದೇಶಿಸಿತ್ತು. ಇದೀಗ ಮತ್ತೆ ತಮಿಳುನಾಡಿಗೆ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ CWRC ಸೂಚನೆ ನೀಡಿದೆ, CWRC ಸಭೆಯಲ್ಲಿ ರಾಜ್ಯದಿಂದ ಎಸಿಎಸ್ ರಾಕೇಶ್ ಸಿಂಗ್ ಭಾಗಿ ಆಗಿದ್ದರು.
ಅ.31 ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ CWMA ಸೂಚನೆ ನೀಡಿದ್ದು, CWRA ಆದೇಶ ಎತ್ತಿಹಿಡಿದಿತ್ತು. ಇದೀಗ ಮತ್ತೆ ಮುಂದಿನ 15 ದಿನ ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ CWRC ಕರ್ನಾಟಕಕ್ಕೆ ಸೂಚನೆ ನೀಡಿದೆ.