ಬೆಳಗಾವಿ : ಮದುವೆಗೆ ನೋ ಎಂದಿದ್ದಕ್ಕೆ ಪ್ರೇಯಸಿಯ ಕತ್ತು ಸೀಳಿ ಕೊಂದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ.
ಯಳ್ಳೂರು ಗ್ರಾಮದ ಪ್ರಶಾಂತ್ ಯಲ್ಲಪ್ಪ(29) ಎಂಬ ಯುವಕ ಈ ಕೃತ್ಯ ಎಸಗಿದ್ದು, ನಂತರ ತಾನೂ ಕೂಡ ಸೂಸೈಡ್ ಮಾಡಿಕೊಂಡಿದ್ದಾನೆ.
ಪ್ರಶಾಂತ್ ಕಳೆದ ಒಂದೂವರೆ ವರ್ಷದಿಂದ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದನು. ಆದರೆ ಪೋಷಕರು ಯುವತಿಗೆ ಬುದ್ದಿವಾದ ಹೇಳಿದ್ದರು.ಪ್ರಶಾಂತ್ ಪ್ರೇಯಸಿಯನ್ನು ಆಕೆಯ ಚಿಕ್ಕಮ್ಮನ ಮನೆಗೆ ಕರೆಸಿಕೊಂಡು ಚಾಕುವಿನಿಂದ ಆಕೆಯ ಕತ್ತು ಸೀಳಿ ಕೊಲೆ ಮಾಡಿ ನಂತರ ತಾನೂ ಕೂಡ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.