ಶಂಕರ್ ನಿರ್ದೇಶನದ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘ಗೇಮ್ ಚೇಂಜರ್’ ಚಿತ್ರ ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ಗಣೇಶ ಚತುರ್ಥಿಯ ದಿನದಂದು ಹಬ್ಬದ ಪ್ರಯುಕ್ತ ಗೇಮ್ ಚೇಂಜರ್ ಚಿತ್ರ ತಂಡ ರಾಮಚರಣ್ ಅಭಿಮಾನಿಗಳಿಗೊಂದು ಸಿಹಿ ಸುದ್ದಿಯೊಂದನ್ನು ನೀಡಿದೆ. ಇದೇ ಸೆಪ್ಟೆಂಬರ್ ತಿಂಗಳಲ್ಲಿ ‘ಗೇಮ್ ಚೇಂಜರ್’ ಚಿತ್ರದ ಎರಡನೇ ಹಾಡು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ.ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ.
ಈ ಚಿತ್ರದಲ್ಲಿ ರಾಮ್ ಚರಣ್ಗೆ ಜೋಡಿಯಾಗಿ ಕಿಯಾರ ಅಡ್ವಾಣಿ ಅಭಿನಯಿಸಿದ್ದು, ಅಂಜಲಿ, ಸಮುದ್ರಕಣಿ, ಎಸ್‌ಜೆ ಸೂರ್ಯ, ಶ್ರೀಕಾಂತ್, ಸುನಿಲ್ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ತಮ್ಮನ್ ಎಸ್ ಸಂಗೀತ ಸಂಯೋಜನೆ ನೀಡಿದ್ದು, ರಾಜು ಶಿರೀಶ್ ನಿರ್ಮಾಣ ಮಾಡಿದ್ದಾರೆ, ಸಮೀರ್ ಮಹಮ್ಮದ್ ಸಂಕಲನ ಸಾಯಿ ಮಹದೇವ್ ಬುರ್ರಾ ಅವರ ಸಂಭಾಷಣೆ, ಎಸ್ ತಿರುನಾವುಕ್ಕರಸು ಛಾಯಾಗ್ರಹಣವಿದೆ.
#GameChanger 2nd single update will arrive this September.