ಚಿತ್ರದುರ್ಗ: ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ನಡೆದ ವಿಷಜಲ ದುರಂತ ಘಟನೆ ಬೆನ್ನಲ್ಲೇ ಕೋಟೆನಾಡು ಚಿತ್ರದುರ್ಗದಲ್ಲಿ ಮತ್ತೊಂದು ದುರಂತ ಸಂಭವಿಸಿದೆ.
ಚಿತ್ರದುರ್ಗ ತಾಲೂಕಿನ ಮುದ್ದಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 10 ಮಂದಿ ಅಸ್ವಸ್ಥಗೊಂಡಿದ್ದಾರೆ ಹಾಗೂ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಲುಷಿತ ನೀರು ಸೇವಿಸಿ 10 ಮಂದಿ ಅಸ್ವಸ್ಥರಾಗಿದ್ದಾರೆ.. ಯೋಗರಾಜ್ (88) ತಿಪ್ಪಮ್ಮ (22) ಸ್ಥಿತಿ ಗಂಭೀರವಾಗಿದೆ. ಸದ್ಯ , ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಜಲ ದುರಂತ ಘಟನೆ ಪದೇ ಪದೇ ಮರುಕಳುಹಿಸುತ್ತಿದ್ದು, ಗ್ರಾಮಸ್ಥರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಅದೇ ರೀತಿ ನಿನ್ನೆ ರಾಯಚೂರು ಜಿಲ್ಲೆಯ ಕಲುಷಿತ ನೀರು ಸೇವಿಸಿ 70ಕ್ಕೂ ಅಧಿಕ ಜನರು ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿನ ಅಂದಾಜು 70ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ