alex Certify BREAKING : ಮತ್ತೊಂದು ಘೋರ ದುರಂತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ತಂದೆ-ಮಗಳು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮತ್ತೊಂದು ಘೋರ ದುರಂತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ತಂದೆ-ಮಗಳು ಬಲಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತ್ತೊಂದು ಘೋರ ದುರಂತ ನಡೆದಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾಗಿ ತಂದೆ-ಮಗಳು ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ.

ದೊಡ್ಡಬಳ್ಳಾಪುರದ ಎಪಿಎಂಸಿ ಮಾರುಕಟ್ಟೆ ಬಳಿ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಮ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಸ್ಥಳದಲ್ಲೇ ಮೃತಪಟ್ಟರೆ , ಮಗಳು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಮೃತರನ್ನು ವೆಂಕಟೇಶ್ (45) ಹಾಗೂ ಪುತ್ರಿ ಯಶಸ್ವಿನಿ (16) ಎಂದು ಗುರುತಿಸಲಾಗಿದೆ ಅಪ್ಪ ಮಗಳು ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಿಲ್ಲರ್ ‘BMTC’ ಬಸ್ ಗೆ ಪುಟ್ಟ ಕಂದಮ್ಮ ಬಲಿ

ಬೆಂಗಳೂರು : ಬಿಎಂಟಿಸಿ (BMTC) ಬಸ್ ಹರಿದು ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರಿನ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಪ್ರಿ.ಕೆಜಿಯಲ್ಲಿ ಓದುತ್ತಿದ್ದ 4 ವರ್ಷದ ಬಾಲಕಿ ಪೂರ್ವಿರಾವ್ ಮೃತಪಟ್ಟಿದ್ದು, ಮಗಳನ್ನು ಶಾಲೆಗೆ ಬಿಡಲು ತಂದೆ ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಬೈಕ್ ಗೆ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ತಂದೆ ಹಾಗೂ ಮಗಳು ಪೂರ್ವಿ ರಸ್ತೆಗೆ ಬಿದ್ದಿದ್ದು ಇದೇ ವೇಳೆ ಬಸ್ ಹರಿದು ಬಾಲಕಿ ಪೂರ್ವಿ ಮೃತಪಟ್ಟಿದ್ದಾಳೆ. ತಂದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬಿಎಂಟಿಸಿ ಬಸ್ ಅಡಿಗೆ ಸಿಲುಕಿದ ಮಗು ನರಳಾಡಿ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ.

ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಿಎಂಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...