ಕೊರಟಾಲ ಶಿವ ನಿರ್ದೇಶನದ ಜೂನಿಯರ್ ಎನ್ಟಿಆರ್ ಅಭಿನಯದ ಬಹು ನಿರೀಕ್ಷಿತ ‘ದೇವರ’ ಚಿತ್ರ ಇದೇ ಸೆಪ್ಟೆಂಬರ್ 27ರಂದು ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ, ಹಾಗೂ ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ. ಇದರ ಟ್ರೈಲರ್ ಈಗಾಗಲೇ ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸಿದ್ದು, ಮತ್ತೊಂದು ಟ್ರೈಲರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ.
ಈ ಚಿತ್ರವನ್ನು ಯುವಸುಧಾ ಆರ್ಟ್ಸ್ ಹಾಗೂ ಎನ್ಟಿಆರ್ ಆರ್ಟ್ಸ್ ಬ್ಯಾನರ್ ನಲ್ಲಿ ಸುಧಾಕರ ಮಿಕ್ಕಿಲಿನೇನಿ, ಕೊಸರಾಜು ಹರಿಕೃಷ್ಣ, ನಂದಮೂರಿ ಕಲ್ಯಾಣ್ ರಾಮ್, ನಿರ್ಮಾಣ ಮಾಡಿದ್ದು, ಜೂನಿಯರ್ ಎನ್ಟಿಆರ್ ಸೇರಿದಂತೆ ಸೈಫ್ ಅಲಿ ಖಾನ್, ಜಾನ್ವಿ ಕಪೂರ್, ಶ್ರುತಿ ಮರಾಠೆ, ಪ್ರಕಾಶ್ ರಾಜ್, ಶ್ರೀಕಾಂತ್, ನರೇನ್, ಮುರಳಿ ಶರ್ಮಾ, ಅಜಯ್, ಅಭಿಮನ್ಯು ಸಿಂಗ್ ಬಣ್ಣ ಹಚ್ಚಿದ್ದಾರೆ. ಅನಿರುದ್ಧ ರವಿಚಂದರ್ ಸಂಗೀತ ಸಂಯೋಜನೆ ನೀಡಿದ್ದು, ಎ. ಶ್ರೀಕರ್ ಪ್ರಸಾದ್ ಸಂಕಲನ ಹಾಗೂ ಆರ್. ರತ್ನವೇಲು ಛಾಯಾಗ್ರಾಹಣವಿದೆ.
https://twitter.com/telugufilmnagar/status/1837371184431702427