ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ನಾಳೆ ಐಟಿ ಅಧಿಕಾರಿಗಳು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 70 ಲಕ್ಷ ರೂ. ಸಿಕ್ಕಿರುವ ಕಾರಣ ಐಟಿ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಜೈಲಿನಲ್ಲಿರುವ ಆರೋಪಿ ದರ್ಶನ್ ಅವರನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು. ಇದೀಗ ನಟ ದರ್ಶನ್ ವಿಚಾರಣೆ ನಡೆಸಲು ಐಟಿ ಅಧಿಕಾರಿಗಳಿಗೆ ಅನುಮತಿ ನೀಡಲಾಗಿದ್ದು, ನಾಳೆ ಅಥವಾ ನಾಡಿದ್ದು ಬಳ್ಳಾರಿ ಜೈಲಿಗೆ ಹೋಗಿ ದರ್ಶನ್ ರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ನಗರದ 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆದಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27 ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.