ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು ದೆಹಲಿಯ ಅಬಕಾರಿ ನೀತಿ 2021-22 ರಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಯಿಂದ ಬಂಧಿಸಲ್ಪಟ್ಟ ನಂತರ ದೆಹಲಿಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.ಇದೀಗ ಕೆ ಕವಿತಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಐ ಅಧಿಕಾರಿಗಳು ಇತ್ತೀಚೆಗೆ ವಿಶೇಷ ನ್ಯಾಯಾಲಯದಿಂದ ಅನುಮತಿ ಪಡೆದು ಜೈಲಿನೊಳಗೆ ಕವಿತಾ ಅವರನ್ನು ವಿಚಾರಣೆ ನಡೆಸಿದ್ದರು. ಅಬಕಾರಿ ನೀತಿಯ ಮೇಲೆ ಪ್ರಭಾವ ಬೀರಲು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಪಾವತಿಸಿದ ಕಿಕ್‌ಬ್ಯಾಕ್‌ಗಳನ್ನು ಸೂಚಿಸುವ ಸಹ-ಆರೋಪಿಯ ಫೋನ್ ಮತ್ತು ಭೂ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳಿಂದ ವಶಪಡಿಸಿಕೊಂಡ ವಾಟ್ಸಾಪ್ ಚಾಟ್‌ಗಳ ಕುರಿತು ತನಿಖಾ ಸಂಸ್ಥೆ ಅವರನ್ನು ಪ್ರಶ್ನಿಸಿದೆ ಎಂದು ತಿಳಿದು ಬಂದಿದೆ.