ಬೆಳ್ತಂಗಡಿ : ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, 19 ವರ್ಷದ ನರ್ಸಿಂಗ್ ಹೋಮ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.
ಅನಾರೋಗ್ಯದಿಂದ ಬಳಲಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ಯುವತಿ ಲೋ ಬಿಪಿ ಆಗಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿಯಾಗಿರುವ ಸುಮಾ ಮೃತಪಟ್ಟಿದ್ದಾರೆ.
ಅನಾರೋಗ್ಯದ ಹಿನ್ನೆಲೆ ಮಂಗಳೂರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ ಆಗಿದ್ದಳು. ಆದರೆ ಆ.13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಲೋ ಬಿಪಿ ಉಂಟಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಈಕೆ ಮಂಗಳೂರಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು ಎಂದು ಹೇಳಲಾಗಿದೆ.