ಬೆಂಗಳೂರು : ಬೆಂಗಳೂರಿನ ಟಿ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಸ್ ಅಡಿ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾನೆ.
ಮೊದಲು ಕಾರಿಗೆ ಡಿಕ್ಕಿಯಾಗಿ ಬೈಕ್ ಸವಾರ ಕೆಳಗೆ ಬಿದ್ದಿದ್ದಾನೆ. ನಂತರ ಹಿಂದೆಯಿಂದ ಬರುತ್ತಿದ್ದ ಬಿಎಂಟಿಸಿ ಬಸ್ ಈತನ ತಲೆ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರನ ತಲೆ ನಜ್ಜುಗುಜ್ಜಾಗಿದ್ದು, ಮೃತ ಸವಾರನ ಗುರುತು ಪತ್ತೆಯಾಗಿಲ್ಲ.
ಘಟನೆ ನಂತರ ಬಿಎಂಟಿಸಿ ಚಾಲಕ ಬಸ್ ಬಿಟ್ಟು ಪರಾರಿಯಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೀಣ್ಯ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆಯಷ್ಟೇ ಬಿಎಂಟಿಸಿ ಬಸ್ ಅಡಿ ಸಿಲುಕಿ 4 ವರ್ಷದ ಮಗು ಮೃತಪಟ್ಟಿತ್ತು,ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ