ಜನವರಿ 12ಕ್ಕೆ ಬಿಡುಗಡೆಯಾಗಲಿದೆ ‘ಅಂಶು’ ಚಿತ್ರದ ಮೊದಲ ಹಾಡು

ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ನಿಶಾ ರವಿಕೃಷ್ಣನ್ ಅಭಿನಯಿಸಿರುವ ‘ಅಂಶು’ ಚಿತ್ರದ ಮೊದಲ ಹಾಡು ಇದೇ ಜನವರಿ 12ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.

ಈ ಕುರಿತು ನಟಿ ನಿಶಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಐಶ್ವರ್ಯ ರಂಗರಾಜನ್ ಈ ಹಾಡಿಗೆ ಧ್ವನಿಯಾಗಿದ್ದು, ಬಾಲ ಸಾರಂಗನ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಚನ್ನಕೇಶವ ರಚಿಸಿ ನಿರ್ದೇಶಿಸಿರುವ ಈ ಚಿತ್ರವನ್ನು ಗ್ರಹಣ ಸ್ಟುಡಿಯೋಸ್ ಬ್ಯಾನರ್ ಅಡಿ ನಿರ್ಮಾಣ ಮಾಡಲಾಗಿದ್ದು, ಸುನಿಲ್ ನರಸಿಂಹಮೂರ್ತಿ ಛಾಯಾಗ್ರಹಣವಿದೆ. ಇದೊಂದು ಮಹಿಳಾ ಪ್ರಧಾನ ಕುರಿತ ಸಿನಿಮಾ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read