ಬೆಂಗಳೂರು: ಫೆಬ್ರುವರಿ 28 ರಂದು ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆ ಕೀ ಆನ್ಸರ್ ಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಲೋಕಸೇವಾ ಆಯೋಗದ ವೆಬ್ಸೈಟ್ ನಲ್ಲಿ ಕೀ ಆನ್ಸರ್ ಪ್ರಕಟಿಸಿದ್ದು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಮಾರ್ಚ್ 10 ರೊಳಗೆ ಆಯೋಗದ ಕಾರ್ಯದರ್ಶಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆಯೊಂದಿಗೆ 50 ರೂ. ಶುಲ್ಕವನ್ನು ಐಒಪಿ ಅಥವಾ ಡಿಡಿ ಮೂಲಕ ಪಾವತಿಸಬೇಕು. ದಾಖಲೆಗಳನ್ನು ದ್ವಿಪ್ರತಿಯಲ್ಲಿ ಹಾಗೂ ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕಿದೆ. ಅಲ್ಲದೇ, ಆಕ್ಷೇಪಣೆ ಸಲ್ಲಿಸುವ ಅಭ್ಯರ್ಥಿಗಳು ದೃಢೀಕರಿಸಿದ ಪ್ರವೇಶ ಪತ್ರದ ಪ್ರತಿಯನ್ನು ಕೂಡ ಸಲ್ಲಿಸಬೇಕೆಂದು ತಿಳಿಸಲಾಗಿದೆ. ಇಲ್ಲದಿದ್ದರೆ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎನ್ನಲಾಗಿದೆ.